ಪೆನ್ ಡ್ರೈವ್" ಗೆಸೆನ್ಸಾರ್ U/A ಪ್ರಮಾಣಪತ್ರ

Apr 3, 2025 - 22:34
 3
Facebook Join WhatsApp Join Telegram Live

ಪೆನ್ ಡ್ರೈವ್" ಗೆಸೆನ್ಸಾರ್  U/A ಪ್ರಮಾಣಪತ್ರ

NewsPin Desk.

ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ,  "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ "ಪೆನ್ ಡ್ರೈವ್" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಾ|ವಿ.ನಾಗೇಂದ್ರ ಪ್ರಸಾದ್ ಅವರು ಗೀತರಚನೆ ಮಾಡಿ ಸಂಗೀತ ವನ್ನೂ ನೀಡಿರುವ ಈ ಚಿತ್ರದ ಹಾಡುಗಳು ಅನಾವರಣವಾಗಲಿದೆ.   

ಚಿತ್ರರಂಗದೊಂದಿಗೆ ಸುಮಾರು ಮೂವತ್ತು ವರ್ಷಗಳ ನಂಟಿರುವ ಹಾಗೂ ರಾಷ್ಟ್ರೀಯ, ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿರುವ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಅವರೆ "ಪೆನ್ ಡ್ರೈವ್" ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ‌.  ಮಾಲಾಶ್ರೀ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.  ತನಿಷಾ ಕುಪ್ಪಂಡ ಹಾಗು ಕಿಶನ್ ಅವರು ಬಹು ನಿರೀಕ್ಷಿತ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು, ಎನ್ ಹನುಮಂತರಾಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ವಿ.ಆರ್ ಸ್ವಾಮಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯ ನಿರ್ವಹಿಸುವುದರೊಂದಿಗೆ ಸಂಭಾಷಣೆಯನ್ನು ಬರೆದಿದ್ದಾರೆ‌.

Join WhatsApp Join Facebook Live Join Telegram

Tags: