ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್: ರೈತ ರ ಪ್ರತಿಭಟನೆ
Join WhatsApp | Join Telegram | Live |

NewsPin Desk.
ಹನೂರು: ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸುವಂತೆ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹನೂರು ಘಟಕದ ವತಿಯಿಂದ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ತಿಳಿಸಿದರು.
ಹನೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ದೇಶದಲ್ಲಿ ಕೃಷಿ ಪಂಪ್ ಸೆಟ್ ಗಳನ್ನು ಅಳವಡಿಸಿಕೊಂಡು ವ್ಯವಸಾಯ ಮಾಡುತ್ತಿರುವ ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗುತ್ತಿಲ್ಲ, ಕಳೆದ ಹಲವಾರು ತಿಂಗಳಿನಿಂದ ಸಮರ್ಪಕ ವಿದ್ಯುತ್ ಪೂರೈಕೆ ಯಾಗದೆ ಕಷ್ಟಪಟ್ಟು ಬೆಳೆದಿರುವ ಬೆಳೆಗಳೆಲ್ಲ ಒಣಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಈ ಮಧ್ಯೆ ಪೋಸ್ಟ್ ಪೇಡ್ ಮತ್ತು ಪ್ರಿಫೈಡ್ ವ್ಯವಸ್ಥೆಯ ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಲು ಸರ್ಕಾರ ಆದೇಶ ಹೊರಡಿಸಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ದೇಶಕ್ಕೆ ಅನ್ನನೀಡುವ ರೈತನ ಬದುಕನ್ನು ಹಸನು ಮಾಡುವ ಬದಲು ರೈತರನ್ನು ಬೀದಿಗೆ ತಂದು ನಿಲ್ಲಿಸುತಿದ್ದೀರಿ ಈ ನಿಟ್ಟಿನಲ್ಲಿ ಹನೂರು ತಾಲೂಕಿನ ರೈತ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಲಿದ್ದು, ಈ ಪ್ರತಿಭಟನೆಗೆ ಹನೂರು ತಾಲೂಕಿನ ಪ್ರತಿಯೊಬ್ಬ ರೈತರು ರೈತ ಮಹಿಳೆಯರು ಸಹಕಾರ ನೀಡುವಂತೆ ಮನವಿ ಮಾಡಿದರು.
ಇವೇಳೇ ತಾಲೂಕು ರೈತ ಸಂಘದ ಉಪಾಧ್ಯಕ್ಷ ಪಳನಿ ಸ್ವಾಮಿ ಸೇರಿದಂತೆ ರೈತ ಮುಖಂಡರುಗಳು ಹಾಜರಿದ್ದರು.
Join WhatsApp | Join Facebook | Live | Join Telegram |