ಶ್ರೀರಾಘವೇಂದ್ರ ಚಿತ್ರವಾಣಿ 49ನೇ ವಾರ್ಷಿಕೋತ್ಸವ 24ನೇ ಪ್ರಶಸ್ತಿ ಪ್ರದಾನ
Join WhatsApp | Join Telegram | Live |

NewsPin Desk.
ಡಿ.ವಿ. ಸುಧೀಂದ್ರ ರ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗೆ MMB legacy ಯಲ್ಲಿ ಅದ್ದೂರಿಯಾಗಿ ನೆರವೇರಿತು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷಎಂ ನರಸಿಂಹಲು, ಕನ್ನಡ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಪತ್ರಕರ್ತೆ ವಿಜಯಾ , ಇಂದ್ರಜಿತ್ ಲಂಕೇಶ್, ನಟಿ ರಾಗಿಣಿ ದ್ವಿವೇದಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
"ಸೊಸೆ ತಂದ ಸೌಭಾಗ್ಯ" ಸಿನಿಮಾದಿಂದ ಪಿ ಆರ್ ಓ ಕ್ಷೇತ್ರಕ್ಕೆ ಆಗಮಿಸಿದ ರಾಘವೇಂದ್ರ ಚಿತ್ರವಾಣಿ ಈಗ ಕನ್ನಡ ಚಿತ್ರರಂಗದ ಸೌಭಾಗ್ಯ ಆಗಿದೆ ಎಂದ ಆರಂಭಿಸಿದ ಕೆ.ವಿ.ಪ್ರಭಾಕರ್, ಸಿನಿಮಾ ಪಿ ಆರ್ ಓ ಗಳನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ನಿರ್ದೇಶಕರನ್ನಾಗಿಸಲು ಮತ್ತು ಸರ್ಕಾರದ ಸಿನಿಮಾ ಪ್ರಶಸ್ತಿಗೆ ಪರಿಗಣಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು.
ಮುಂದಿನ ವರ್ಷ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 50ನೇ ವರ್ಷ. ಈ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಿ. ನಿಮ್ಮ ಜೊತೆಗೆ ನಾವು ಇರತ್ತೇವೆ ಎಂದರು.
ಎಂ.ನರಸಿಂಹಲು, ಉಮೇಶ್ ಬಣಕಾರ್, ರಾಕ್ ಲೈನ್ ವೆಂಕಟೇಶ್, ವಿಜಯಾ,ರಾಗಿಣಿ ದ್ವಿವೇದಿ ಹಾಗೂ ಇಂದ್ರಜಿತ್ ಲಂಕೇಶ್ ಅವರು ತಮ್ಮ ಪ್ರೀತಿತುಂಬಿದ ಮಾತುಗಳ ಮೂಲಕ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಹಿರಿಯ ಚಲನಚಿತ್ರ ನಿರ್ಮಾಪಕಿ ಶ್ರೀಮತಿ ಮೀನಾಕ್ಷಿ ಕೆ.ವಿ. ಜಯರಾಂ ಅವರಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
ಕುಮಾರಿ ಅನುರಾಧಾ ಭಟ್(ಗಾಯಕಿ) ಅತ್ತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ ಡಾ. ರಾಜಕುಮಾರ್ ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ, ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ಅವರಿಗೆ ಯಜಮಾನ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ ಅವರಿಂದ, ಹಿರಿಯ ನಟಿ ರೇಖಾರಾವ್ ಅವರಿಗೆ ನಟಿ ಡಾ||ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ,
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್‌ಮೆಂಟ್ ಪ್ರೈ ಲಿ ಪ್ರಶಸ್ತಿ (ಅತ್ಯುತ್ತಮ ಸಂಗೀತ ನಿರ್ದೇಶನ, ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕಾಗಿ, ಶಿವಮ್ಮ ಚಿತ್ರದ ಉತ್ತಮ ಕಥಾಲೇಖನಕ್ಕಾಗಿ ಜೈಶಂಕರ್ ಆರ್ಯರ್ ಅವರಿಗೆ ಖ್ಯಾತ ನಿರ್ದೇಶಕ-ನಿರ್ಮಾಪಕ ಕೆ.ವಿ. ಜಯರಾಂ ಪ್ರಶಸ್ತಿ, ಮೀನಾಕ್ಷಿ ಜಯರಾಂ ಅವರಿಂದ, "ಇಬ್ಬನಿ ತಬ್ಬಿದ ಇಳೆಯಲಿ" ಚಿತ್ರದ ಸಂಭಾಷಣೆಗಾಗಿ ಚಂದ್ರಜಿತ್ ಬೆಳ್ಳಿಯಪ್ಪ ಅವರಿಗೆ ಖ್ಯಾತ ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ, ಡಾ.ಎಸ್.ಕೆ. ನರಹರಿ ಅವರಿಂದ, "ಫೋಟೊ" ಚಿತ್ರದ ಚೊಚ್ಚಲ ನಿರ್ದೇಶನಕ್ಕಾಗಿ ಉತ್ಸವ್ ಗೋನ್ವಾರ್ ಅವರಿಗೆ ಬಿ. ಸುರೇಶ ಅವರು ನೀಡುವ ಪ್ರಶಸ್ತಿ, "ಕೃಷ್ಣಂ ಪ್ರಣಯ ಸಖಿ" ಚಿತ್ರದ "ದ್ವಾಪರ" ಹಾಡಿನ ಗೀತರಚನೆಗಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಅವರಿಗೆ ಹಿರಿಯ ಪತ್ರಕರ್ತಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪತ್ರಕರ್ತ ವಿನಾಯಕರಾಮ್ ಅವರು ನೀಡುವ ಪ್ರಶಸ್ತಿ ಗಳನ್ನು ನೀಡಿ ಗೌರವಿಸಲಾಯಿತು.
ಈ ಬಾರಿ ಸಮರ್ಜಿತ್ ಲಂಕೇಶ್ ಅವರು "ಗೌರಿ" ಚಿತ್ರದ ಅಭಿನಯಕ್ಕಾಗಿ ಶ್ರೀರಾಘವೇಂದ್ರ ಚಿತ್ರವಾಣಿಯ ವಿಶೇಷ ಪ್ರಶಸ್ತಿಗೆ ಭಾಜನರಾದರು.
ಪ್ರಶಸ್ತಿ ವಿಜೇತರು ತಮ್ಮ ಸಂತೋಷವನ್ನು ಹಂಚಿಕೊAಡರು. ಪ್ರಶಸ್ತಿ ಪ್ರಾಯೋಜಕರು, ಚಲನಚಿತ್ರ ಹಾಗೂ ಮಾಧ್ಯಮದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸುಧೀಂದ್ರ ವೆಂಕಟೇಶ್ ಸ್ವಾಗತಿಸಿದರು. ಸುಧೀಂದ್ರ ಅವರ ಕುಟುಂಬದ ಸದಸ್ಯರು ಒಡನಾಡಿ ಮಿತ್ರರು ಉಪಸ್ಥಿತರಿದ್ದರು.
Join WhatsApp | Join Facebook | Live | Join Telegram |